ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಶೇ.40ರಷ್ಟು ವೇತನ ಹೆಚ್ಚಳ ಮಾಡಲು ನೌಕರರು ಪಟ್ಟು ಹಿಡಿದಿದ್ದು, ಶೇ.17ರಷ್ಟು ಹೆಚ್ಚು ಹೆಚ್ಚಳ ಮಾಡಲು ಸಿಎಂ ಬಸವರಾಜ್ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ.
ಹಣಕಾಸು ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಸಿಎಂ ನಿರ್ಧರಿಸಿದ್ದು, ಈ ಕುರಿತು ಮಧ್ಯಂತರ ಆದೇಶ ನೀಡಲು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ವೇತನ ಹೆಚ್ಚಳ..ಬಂದ್ ಮುಂದುವರಿಕೆ
ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಸಿಎಂ ಘೋಷಣೆ ಮಾಡಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಇದು ಕೇವಲ ಭರವಸೆ ಆಗಿ ಉಳಿಯಬಾರದು. ಆದೇಶ ಆದ ಮೇಲೆ ನಾವು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ.
ಶೀಘ್ರ ಅಂದರೆ ಯಾವಾಗ? ಅದನ್ನು ಆದೇಶ ರೂಪದಲ್ಲಿ ಜಾರಿಯಾಗಲಿ ಎಂದು ಅವರು ತಿಳಿಸಿದ್ದಾರೆ. ಅಲ್ಲಿಯವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.