ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಇನ್ನು 1 ತಿಂಗಳ ಬಳಿಕ ಪತನವಾಗಲಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇಂದು ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಯಡಿಯೂರಪ್ಪ ಅವರು ದೇಶದಲ್ಲಿರುವ ಭ್ರಷ್ಟರಲ್ಲಿಯೇ ಭ್ರಷ್ಟರು. ಭ್ರಷ್ಟಾಚಾರ ಆರೋಪದಲ್ಲಿ ಜೈಲಿಗೆ ಹೋಗಿ ಬಂದ ಮೊದಲ ಸಿಎಂ ಯಡಿಯೂರಪ್ಪ. ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಭ್ರಷ್ಟರ ಕೂಪವಾಗಿದೆ. ರಾಜಕೀಯ ಕಾರಣಕ್ಕಾಗಿ ಬಸವಣ್ಣ ಪುತ್ಥಳಿ ಸ್ಥಾಪನೆಗೆ ಮುಂದಾಗಿದ್ದಾರೆ. ಮತ್ತೆ ಪುತ್ಥಳಿ ಬೇಕಿರಲಿಲ್ಲ ಎಂದು ವಾಟಾಳ್ ನಾಗರಾಜ್ ಅವರು ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.