ಬೆಂಗಳೂರು: ಸಿಎಂ ಯಡಿಯೂರಪ್ಪ ದೆಹಲಿ ಭೇಟಿಯ ಬಗ್ಗೆ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಆರು ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಹೌದು ಈ ಕುರಿತು ಮಾತನಾಡಿರುವ ಎಚ್.ಡಿ. ಕುಮಾರಸ್ವಾಮಿ ಅವರು, ‘ನಿನ್ನೆ ವಿಶೇಷ ವಿಮಾನದಲ್ಲಿ ಪುತ್ರರೊಂದಿಗೆ ದೆಹಲಿಗೆ ತೆರಳಿದ ಯಡಿಯೂರಪ್ಪ ಆರು ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ’ ಎಂದು ಹೇಳಿದ್ದಾರೆ. ‘ಬ್ಯಾಗ್ ನಲ್ಲಿ ರಾಜ್ಯದ ವಿಷಯಗಳನ್ನು ಹಾಕಿದ್ದರೋ ಅಥವಾ ಬೇರೆ ಏನಿತ್ತು ಅಂತ ಗೊತ್ತಿಲ್ಲ. ಅದರ ಬಗ್ಗೆ ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ’ ಎಂದು ಕುಟುಕಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.