ಮಧ್ಯರಾತ್ರಿ ಸಿಎಂ ಬೊಮ್ಮಾಯಿ ಧ್ವಜಾರೋಹಣ; ರಾಜ್ಯದ ಜನರಿಗೆ ಸಿಎಂ ಭರ್ಜರಿ ಗಿಫ್ಟ್‌..?

ಬೆಂಗಳೂರು:  ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಧ್ಯರಾತ್ರಿ ರಾಷ್ಟ್ರಧ್ವಜವನ್ನು ಹಾರಿಸಿ, ಸಂಭ್ರಮಿಸಲಾಗಿದೆ. ಹೌದು, ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರೂ ಮಧ್ಯರಾತ್ರಿ ಧ್ವಜಾರೋಹಣ ನೆರವೇರಿಸಿದ್ದು, ಸಿಎಂಗೆ ಸಚಿವ ಅಶ್ವತ್ಥ…

CM Basavaraj Bommai flag hoisting

ಬೆಂಗಳೂರು:  ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಧ್ಯರಾತ್ರಿ ರಾಷ್ಟ್ರಧ್ವಜವನ್ನು ಹಾರಿಸಿ, ಸಂಭ್ರಮಿಸಲಾಗಿದೆ.

ಹೌದು, ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರೂ ಮಧ್ಯರಾತ್ರಿ ಧ್ವಜಾರೋಹಣ ನೆರವೇರಿಸಿದ್ದು, ಸಿಎಂಗೆ ಸಚಿವ ಅಶ್ವತ್ಥ ನಾರಾಯಣ ಸಾಥ್‌ ನೀಡಿದ್ದು, ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇನ್ನು, ದಕ್ಷಿಣ ಭಾರತದ ಪ್ರಖ್ಯಾತ ಗಾಯಕಿ ಮಂಗ್ಲಿ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು.

Vijayaprabha Mobile App free

ಸ್ವಾತಂತ್ರ್ಯ ದಿನ: ರಾಜ್ಯದ ಜನರಿಗೆ ಸಿಎಂ ಗಿಫ್ಟ್‌..?

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಜ್ಯದ ಜನರಿಗೆ ಸಿಎಂ ಗಿಫ್ಟ್‌ ನೀಡ್ತಾರಾ?. ಹೌದು ಎಂಬ ಸುಳಿವು ನೀಡಿದ್ದಾರೆ ಸಚಿವ ಎಸ್.ಟಿ.ಸೋಮಶೇಖರ್.‌

ಅಮೃತ ಮಹೋತ್ಸವ ಹಿನ್ನೆಲೆ, ಸಿಎಂ ಕೆಲವೊಂದು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಾರೆ ಎಂದಷ್ಟೇ ಸೋಮಶೇಖರ್‌ ಸುಳಿವು ನೀಡಿದ್ದು, ಯಾವ ಯಾವ ಹೊಸ ಕಾರ್ಯಕ್ರಮಗಳನ್ನು ಘೋಷಿಸುತ್ತಾರೆ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಇತ್ತೀಚೆಗಷ್ಟೇ ಸರ್ಕಾರ ಒಂದು ವರ್ಷ ಪೂರೈಸಿದ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಸಿಎಂ ಬೊಮ್ಮಾಯಿ ಘೋಷಿಸಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.