ಹವಾಮಾನ ಬದಲಾವಣೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಕುಸಿತವಾಗಿದ್ದು, ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಿದೆ.
ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದ್ದು, ಒಳನಾಡಿನಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಕಡಿಮೆ ಆಗಲಿದೆ’ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು, ಬೆಳಗಾವಿ, ಕಲಬುರಗಿ, ಚಿತ್ರದುರ್ಗ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ರಾತ್ರಿ ಚಳಿ ತೀವ್ರವಾಗಿರಲಿದೆ ಎಂದು ಮಾಹಿತಿ ನೀಡಿದೆ.
ಬೀದರ್‌ನಲ್ಲಿ ಅತೀ ಕಡಿಮೆ ತಾಪಮಾನ ದಾಖಲಾಗಿದ್ದು, 5.5 ಡಿಗ್ರಿ ಸೆಲ್ಸಿಯಸ್ ಇತ್ತು, ಬಾಗಲಕೋಟೆ 6, ವಿಜಯಪುರ 6.5, ಬಳ್ಳಾರಿ 7.2, ಧಾರವಾಡ 9.8, ಬೆಳಗಾವಿ 10, ಕಲಬುರಗಿಯಲ್ಲಿ 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.