ಕೆಲವು ದಿನಗಳಿಂದ ರಾಜ್ಯದಲ್ಲಿ ಚಳಿಯ ಅಬ್ಬರ ಜೋರಾಗಿದ್ದು, ಮುಂದಿನ ಐದು ದಿನಗಳ ಕಾಲ ಚಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಿಂದಿನ ವರ್ಷಗಳಿಗಿಂತಲೂ ಈ ಬಾರಿ ಚಳಿ ಹೆಚ್ಚಿಗಿದ್ದು, ಮುಂದಿನ ಕೆಲವು ದಿನಗಳವರೆಗೆ ಇದೇ ಪರಿಸ್ಥಿತಿ ಮುಂದುವರೆಯಲಿದ್ದು, ವಿಜಯಪುರ, ಬಳ್ಳಾರಿ, ಬಾಗಲಕೋಟೆ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶೀತ ಅಲೆಯ ಭೀತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಈಗಾಗಲೇ ಶೀತ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ಇದರ ಜೊತೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೀದರ್ನಲ್ಲಿ ರಾಜ್ಯದ ಅತಿ ಕಡಿಮೆ ಅಂದರೆ 8.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.