ಕೊಪ್ಪಳ: ಭೀಕರ ರಸ್ತೆ ಅಪಘಾತದಲ್ಲಿ ಟಾಟಾ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿ ನಡೆದಿದೆ.
ಜನ್ಮ ದಿನ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮಕ್ಕೆ ಮರಳುವಾಗ ಘಟನೆ ಸಂಭವಿಸಿದ್ದು, ಸ್ಕಾರ್ಪಿಯೋ ವಾಹನ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.
ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದ್ದು, ಮೃತಪಟ್ಟ ಐವರೂ ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.