ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಅರೋಗ್ಯ ಸಚಿವ ಸುಧಾಕರ್ ಅವರು ಹೇಳಿದ್ದಾರೆ.
ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದು ಅರೋಗ್ಯ ಸಚಿವ ಸುಧಾಕರ್ ಅವರು ಹೇಳಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ.
— Dr Sudhakar K (@mla_sudhakar) November 13, 2020
ನ.17 ರಿಂದಲೇ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಆರಂಭ: ಸಚಿವ ಶ್ರೀರಾಮುಲು
ಇನ್ನು ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನಲೆಯಲ್ಲಿ ರಾಜ್ಯದಾತ್ಯಂತ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯವನ್ನು ನವಂಬರ್ 17 ರಿಂದಲೇ ಆರಂಭಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಶ್ರೀರಾಮುಲು ಅವರು ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಶೀರಾಮುಲು ಅವರು, ಸಿಎಂ ಅದ್ಯಕ್ಷತೆಯಲ್ಲಿ ಅಕ್ಟೊಬರ್ 23 ರಂದು ನಡೆದ ಸಭೆಯ ತೀರ್ಮಾನದಂತೆ, ಇಲಾಖೆಯು ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23ರಂದು ನಡೆದ ಸಭೆಯ ತೀರ್ಮಾನದಂತೆ, ನವೆಂಬರ್ 17 ರಿಂದ ಮೆಟ್ರಿಕ್ ನಂತರದ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳ
ತರಗತಿಗಳನ್ನು ಆರಂಭಿಸಲಾಗುತ್ತಿದೆ.1/2 pic.twitter.com/keosUHR34p— B Sriramulu (@sriramulubjp) November 13, 2020