ಶಿವಮೊಗ್ಗ: ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ನಡೆದ ರೈತರ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಅರೋಪದ ಮೇಲೆ ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದ ರೈತರು ಬೆಂಗಳೂರಿಗೆ ದಿಗ್ಭಂಧನ ಹಾಕಬೇಕು ಎಂದು ನೀಡಿದ್ದ ಹೇಳಿಕೆ ಆಧಾರಿಸಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿ, ಐಪಿಸಿ ಸೆಕ್ಷನ್ 153ರ ಅಡಿ FIR ದಾಖಲಿಸಿಕೊಂಡಿದ್ದಾರೆ.
ಮಾರ್ಚ್ 20 ರಂದು ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್ ಶಿವಮೊಗ್ಗದಲ್ಲಿ ನಡೆದಿತ್ತು. ಈ ಮಹಾಪಂಚಾಯತ್‌ಗೆ ರೈತ ಮುಖಂಡರಾದ ರಾಕೇಶ್ ಟೀಕಾಯತ್, ಯುದ್ದವೀರ್ ಸಿಂಗ್, ಚುಕ್ಕಿ ನಂಜುಂಡಸ್ವಾಮಿ, ದರ್ಶನ್ ಪಾಲ್, ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಅನೇಕ ರೈತ ಮುಖಂಡರು ಭಾಗವಹಿಸಿದ್ದರು.