C P Yogeshwar : ರಾಜ್ಯದಲ್ಲಿ ಮೂರೂ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಸಂಕಷ್ಟ ಶುರುವಾಗಿದೆ.
ಹೌದು, ನವೆಂಬರ್ 13 ರಂದು ಚೆನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ನಡೆದಿದ್ದು, ನವೆಂಬರ್ 23 ರಂದು ಫಲಿತಾಂಶ ಹೊರಬೀಳಲಿದೆ. ಇದರ ಬೆನ್ನಲ್ಲೇ ಚನ್ನಪಟ್ಟಣ ಕ್ಷೇತ್ರದ ಕೈ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಿರುದ್ಧ ಅವರ ಪುತ್ರ ಶ್ರವಣ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: BIG BREAKING | ರಾಜ್ಯದಲ್ಲಿ 14 ಲಕ್ಷ BPL card ರದ್ದು!
ಪ್ರಕರಣದ ವಿಚಾರಣೆ ನಾಳೆ ನಡೆಯಲಿದ್ದು, ವಿಚಾರಣೆಯಲ್ಲಿ ಸಿಪಿ ಯೋಗೇಶ್ವರ ವಿರುದ್ಧದ ಆರೋಪ ಸಾಬೀತಾದರೆ ಬಂಧನವಾಗುವ ಸಾಧ್ಯತೆ ಇದ್ದು, ಫಲಿತಾಂಶಕ್ಕೂ ಮುನ್ನವೇ ಜೈಲಿಗೆ ಹೋಗುವ ಸಾಧ್ಯತೆ ಇದೆ.
C P Yogeshwar ಪ್ರಕರಣವೇನು..?
ಬೆಂಗಳೂರಿನಲ್ಲಿ ಸಿ.ಪಿ ಯೋಗೇಶ್ವರ್ ಮೊದಲ ಪತ್ನಿ ಮನೆ ಖರೀದಿಸಿದ್ದರು. ಆದರೆ ಸಿ.ಪಿ ಯೋಗೇಶ್ವರ್ ಅವರು ಪುತ್ರ ಶ್ರವಣ್ ಸಹಿಯನ್ನು ನಕಲು ಮಾಡಿ ಭಾಗ ಕೇಳಿ ಅರ್ಜಿ ಹಾಕಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆ ಸಿ.ಪಿ ಯೋಗೇಶ್ವರ್ ವಿರುದ್ಧ ಪುತ್ರ ಶ್ರವಣ್ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಅನರ್ಹರ BPL card ಮಾತ್ರ ರದ್ದು; ಅರ್ಹರಿಗೆ ರೇಷನ್ ಕಾರ್ಡ್ ರದ್ದು ಮಾಡೋಲ್ಲ: ಸಿಎಂ ಸಿದ್ದರಾಮಯ್ಯ