Actor Darshan : ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್ ನಟ ದರ್ಶನ್’ಗೆ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಆದರೆ ನಟ ದರ್ಶನ್’ಗೆ ಇದು ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ಜಾಮೀನು ಪಡೆದ ಬಳಿಕ ಒಂದು ವಾರದಲ್ಲಿ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು ಎಂದು ಹೇಳಿದ್ದು, ಪಾಸ್ಪೋರ್ಟ್ ಅನ್ನು ಕೋರ್ಟ್ ಸುಪರ್ಧಿಗೆ ನೀಡಬೇಕಾಗಿದೆ.
ಇದನ್ನೂ ಓದಿ: ನಟ ದರ್ಶನ್‌ಗೆ ಮಧ್ಯಂತರ ಜಾಮೀನು; ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ ನಡೆದಿದ್ದೇನು..?
actor Darshan : ದರ್ಶನ್’ಗೆ ಹೈಕೋರ್ಟ್ ವಿಧಿಸಿದ ಆ 8 ಷರತ್ತುಗಳು?
1. ಪಾಸ್ ಪೋರ್ಟ್ ಸರೆಂಡರ್
2. 2 ಲಕ್ಷ ರೂಪಾಯಿ ಬಾಂಡ್
3. ಇಬ್ಬರ ಶ್ಯೂರಿಟಿ
4. ಸಾಕ್ಷಿ ಮೇಲೆ ಪ್ರತ್ಯಕ್ಷ, ಪರೋಕ್ಷ ಬೆದರಿಕೆ ಹಾಕಬಾರದು
5. ಒಂದು ವಾರದಲ್ಲಿ ವೈದ್ಯಕೀಯ ಶಿಫಾರಸು ವರದಿ ಸಲ್ಲಿಸಬೇಕು
6. ಸಾಕ್ಷಿ ನಾಶಕ್ಕೆ ಪ್ರಯತ್ನ ಪಡಬಾರದು
7. ಸಾಕ್ಷಿಗಳ ಸಂಪರ್ಕ ಮಾಡಬಾರದು
8. ಜಾಮೀನಿನ ದುರುಪಯೋಗ ಮಾಡಿಕೊಳ್ಳಬಾರದು. ಅಷ್ಟೇ ಅಲ್ಲದೇ ಆಸ್ಪತೆಗೆ ದಾಖಲಾಗುತ್ತಿದ್ದಂತೆ 1 ವಾರದೊಳಗೆ ಪ್ರಾಥಮಿಕ ವೈದ್ಯಕೀಯ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ