Congress government scam 2024 : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ 2024ರಲ್ಲಿ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿಬಂದಿತ್ತು. ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸೇರಿದಂತೆ 2024 ರಲ್ಲಿ ಸದ್ದು ಮಾಡಿದ ಕಾಂಗ್ರೆಸ್ ಸರ್ಕಾರದ ಹಗರಣಗಳ ಮಾಹಿತಿ ಇಲ್ಲಿದೆ
2024 ರ ಕಾಂಗ್ರೆಸ್ ಸರ್ಕಾರದ ಹಗರಣಗಳು (Congress government scam 2024)
- ಮುಡಾ ಹಗರಣ
- ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ
- ಭೋವಿ ನಿಗಮ ಅವ್ಯವಹಾರ
- ಅಬಕಾರಿ ಹಗರಣ
- ಪ್ರವಾಸೋದ್ಯಮ ಅಕ್ರಮ
1. ಮುಡಾ ಹಗರಣ (Muda scam)
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ (Muda scam) 2024ರಲ್ಲಿ ರಾಜ್ಯದಲ್ಲಿ ಸದ್ದು ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿಬಂದಿತ್ತು. ಸಿಎಂ ಲೋಕಾಯುಕ್ತ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಸಿದ್ದರಾಮಯ್ಯ ವಿಚಾರಣೆಗೂ ಹಾಜರಾಗಿದ್ದರು.
ಮತ್ತೊಂದೆಡೆ, ಜಾರಿ ನಿರ್ದೇಶನಾಲಯವೂ ಮುಡಾ ಹಗರಣ ಸಂಬಂಧ ಪ್ರಕರಣ ದಾಖಲಿಸಿಕೊ೦ಡು ತನಿಖೆ ನಡೆಸುತ್ತಿದೆ.
ಇದನ್ನೂ ಓದಿ: Jioಗೆ ಗುಡ್‌ಬೈ ಹೇಳಿದ 3.76 ಮಿಲಿಯನ್ ಬಳಕೆದಾರರು: ಸತತ ನಾಲ್ಕನೇ ತಿಂಗಳು ಜಿಯೋಗೆ ಹೊಡೆತ
2. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Development Corporation scam)
ಈ ಹಗರಣವು ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಕಲ್ಯಾಣ ನಿಗಮ (Valmiki Development Corporation) ನಿಯಮಿತದಲ್ಲಿನ ಭ್ರಷ್ಟಾಚಾರದ ಆರೋಪವಾಗಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದ ಹಗರಣ ಇದಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡ ನಂತರ ಹಗರಣ ಬೆಳಕಿಗೆ ಬಂದಿತ್ತು.
ಇದನ್ನೂ ಓದಿ:ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿದ ಸಿಎಂ
3. ಭೋವಿ ನಿಗಮ ಅವ್ಯವಹಾರ (Bhovi Corporation scam)
2024ರಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ (Bhovi Corporation) ಕೂಡ ಬಹುಕೋಟಿ ರೂ. ಮೊತ್ತದ ಅವ್ಯವಹಾರ ನಡೆದಿತ್ತು. ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ 34 ಕೋಟಿ ರೂ. ಹಣ ವರ್ಗಾವಣೆಯಾಗಿರುವುದು ಸಿಐಡಿ ತನಿಖೆ ವೇಳೆ ತಿಳಿದುಬಂದಿದ್ದು, ಉದ್ಯಮಿ ಜೀವಾ ಅವರು ಬೆಂಗಳೂರಿನ ಪದ್ಮನಾಭನಗರದ ರಾಘವೇಂದ್ರ ಲೇಔಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಪ್ರಕರಣ ಬೆಳಕಿಗೆ ಬಂದಿತ್ತು.
ಇದನ್ನೂ ಓದಿ:Doctors negligence ವೈದ್ಯರ ನಿರ್ಲಕ್ಷ್ಯ ಆರೋಪ: ಬೆಂಗಳೂರಿನಲ್ಲಿ ಬಾಣಂತಿ ಸಾವು!
4. ಅಬಕಾರಿ ಹಗರಣ (Excise scam)
ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮ೦ಡ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ನವೆಂಬರ್‌ನಲ್ಲಿ ಕೇಳಿಬಂದಿತ್ತು. ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ, ವರ್ಗಾವಣೆ, ಬಡ್ತಿಗೆ ಅಧಿಕಾರಿಗಳು ಲಂಚ ಪಡೆದಿದ್ದಾರೆ. ರಾಜ್ಯದಲ್ಲಿನ 11 ಸಾವಿರ ವೈನ್ ಸ್ಟೋರ್ ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಪಡೆಯುತ್ತಿದ್ದಾರೆ. ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದರು.
ಇದನ್ನೂ ಓದಿ:ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್; ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ
5. ಪ್ರವಾಸೋದ್ಯಮ ಅಕ್ರಮ (Tourism scam)
ಇನ್ನು, ವಾಲ್ಮೀಕಿ ಹಗರಣದ ರೀತಿಯಲ್ಲೇ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆ 2,47,73,999 ರೂ ಹಣ ಅಕ್ರಮ ವರ್ಗಾವಣೆ ಆಗಿರುವುದು 2024ರ ಜುಲೈಯಲ್ಲಿ ಬೆಳಕಿಗೆ ಬಂದಿದ್ದು, ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಎಂಬುವವರು ಬಾಗಲಕೋಟೆ ಐಡಿಬಿಐ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ ನಂತರ ಈ ಹಗರಣ ಬಯಲಾಗಿತ್ತು.