ಬೆಂಗಳೂರು: ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆಯನ್ನು ನೀಡುವುದಿಲ್ಲ. ನಾನು ನಾಳೆ ರಾಜೀನಾಮೆ ನೀಡಿದರೇ ಬಿಜೆಪಿಗೆ ಲಾಭವಾಗುತ್ತದೆ ಎಂದು ಹೇಳುವ ಮೂಲಕ ಸಿಎಂ ಇಬ್ರಾಹಿಂ ಯೂಟರ್ನ್ ಹೊಡೆದಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಇಬ್ರಾಹಿಂ ಅವರು, ಸದ್ಯ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡೋಲ್ಲ. ಈ ಸಂದರ್ಭದಲ್ಲಿ ರಾಜೀನಾಮೆ ಕೊಟ್ಟರೆ ಬಿಜೆಪಿಯಿಂದ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತದೆ. ಹೀಗಾಗಿ ಬಜೆಟ್ ಅಧಿವೇಶನದ ನಂತರ ರಾಜೀನಾಮೆ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಇಬ್ರಾಹಿಂ ಹೇಳಿದರು.
ಇನ್ನು, ಹೈಕಮಾಂಡ್ ನಿಂದ ನನಗೆ ಬುಲಾವ್ ಬಂದಿದ್ದು, ಹೈಕಮಾಂಡ್ ಜೊತೆ ಮಾತನಾಡಿ ಮತ್ತೇ ನಮ್ಮ ವರಿಷ್ಠರ ಜೊತೆ ಸಭೆ ನಡೆಸಲಿದ್ದು, ನಂತರ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಇಬ್ರಾಹಿಂ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.