ರಾಹುಲ್‌ ಗಾಂಧಿಗೆ ಬಿಗ್ ಶಾಕ್; ಲೋಕಸಭಾ ಸದಸ್ಯತ್ವ ರದ್ದು

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ದೊಡ್ಡ ಹೊಡೆತ ಬಿದ್ದಿದೆ. ಅವರ ಸಂಸತ್ ಸದಸ್ಯತ್ವ ರದ್ದಾಗಿದೆ. ಮೋದಿ ಸರ್‌ನೇಮ್‌ ಹೇಳಿಕೆ ನೀಡಿ ತಪ್ಪಿತಸ್ಥ ಎನಿಸಿಕೊಂಡಿದ್ದ ವಯನಾಡ್‌ ಸಂಸದ ರಾಹುಲ್‌ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ.…

rahul-gandhi-vijayaprabha-news

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ದೊಡ್ಡ ಹೊಡೆತ ಬಿದ್ದಿದೆ. ಅವರ ಸಂಸತ್ ಸದಸ್ಯತ್ವ ರದ್ದಾಗಿದೆ. ಮೋದಿ ಸರ್‌ನೇಮ್‌ ಹೇಳಿಕೆ ನೀಡಿ ತಪ್ಪಿತಸ್ಥ ಎನಿಸಿಕೊಂಡಿದ್ದ ವಯನಾಡ್‌ ಸಂಸದ ರಾಹುಲ್‌ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ.

ಇದನ್ನು ಓದಿ: ITR Filing: ಈ ತಿಂಗಳೊಳಗೆ ಆದಾಯ ತೆರಿಗೆ ಸಲ್ಲಿಸಲು ತಪ್ಪಿದರೆ, 5000ರೂ ಬಾರಿ ದಂಡ, ಕಾನೂನು ಕ್ರಮ

ಹೌದು, ‘ಮೋದಿ ಉಪನಾಮ’ ಹೇಳಿಕೆ ನೀಡಿದ್ದಕ್ಕಾಗಿ ರಾಹುಲ್ ಅವರನ್ನು ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಆದೇಶಿಸಿದ ಬೆನ್ನಲ್ಲೆ ಸ್ಪೀಕರ್‌ ಓಂ ಬಿರ್ಲಾ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಗುಜರಾತ್​ನ ಸೂರತ್ ನ್ಯಾಯಾಲಯ ರಾಹುಲ್‌ ಗಾಂಧಿಯನ್ನು ದೋಷಿ ಎಂದು ಘೋಷಿಸಿ, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ.ದಂಡ ವಿಧಿಸಿ ತೀರ್ಪು ವಿಧಿಸಿತ್ತು. ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು

Vijayaprabha Mobile App free

ಇದನ್ನು ಓದಿ: ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿ

ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಕ್ಕೆ ಕಾರಣ; 

ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಪ್ರಧಾನಿಯನ್ನು ಅವಮಾನಿಸಿದ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಮತ್ತು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅಕ್ಟೋಬರ್ 2021 ರಲ್ಲಿ, ರಾಹುಲ್ ಗಾಂಧಿ ಈ ಪ್ರಕರಣದ ವಿಚಾರಣೆಗಾಗಿ ಸೂರತ್ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದರು.

ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್, ನರೇಶ್‌ ಲವ್ವಿಡವ್ವಿ, ಮದುವೆ, ಹನಿಮೂನ್‌ ಬಣ್ಣ ಬಯಲು; ಇದಕ್ಕಾಗಿ ಇಷ್ಟೆಲ್ಲಾ ಮಾಡಿದ್ರಾ..?

ತನಿಖೆಯ ನಂತರ 2023ರ ಮಾರ್ಚ್ 23ರಂದು ಗುರುವಾರ ನ್ಯಾಯಾಲಯ ರಾಹುಲ್‌ ಗಾಂಧಿಯನ್ನು ದೋಷಿ ಎಂದು ಘೋಷಿಸಿ, 2 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ.ದಂಡ ವಿಧಿಸಿ ತನ್ನ ತೀರ್ಪನ್ನು ನೀಡಿತು. ಸಂಸತ್ತಿನ ಸದಸ್ಯರು ತಪ್ಪಿತಸ್ಥರೆಂದು ಸಾಬೀತಾದರೆ ಮತ್ತು ಕನಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದರೆ ಅವರು ಸಂಸದರಾಗಲು ಅನರ್ಹರಾಗುತ್ತಾರೆ.

ಇದನ್ನು ಓದಿ: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಆಧಾರ್-ವೋಟರ್ ಐಡಿ ಲಿಂಕ್‌ ಗಡುವು ವಿಸ್ತರಣೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.