ಮಠದ ಒಳಗಿದ್ದವರಿಂದಲೇ ಪಿತೂರಿ: ಮುರುಘಾ ಶ್ರೀಗಳ ಆಡಿಯೋ ವೈರಲ್!

ಮುರುಘಾ ಮಠದಲ್ಲಿ ಲೈಂಗಿಕ ಕಿರುಕುಳ ಆರೋಪ ಸಂಬಂಧ ಮಠದಲ್ಲಿ ನಿನ್ನೆ ಸಭೆ ಕರೆಯಲಾಗಿದ್ದು, ಶ್ರೀಗಳು ಮಠದಲ್ಲಿ ಮತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ. ಹೌದು, ಮಠದ ಒಳಗಿರುವವರು ಪಿತೂರಿ ಮಾಡಿದ್ದಾರೆ. ಈ ಸಮಸ್ಯೆ ಶಾಶ್ವತವಲ್ಲ…

Muruga Math Shri

ಮುರುಘಾ ಮಠದಲ್ಲಿ ಲೈಂಗಿಕ ಕಿರುಕುಳ ಆರೋಪ ಸಂಬಂಧ ಮಠದಲ್ಲಿ ನಿನ್ನೆ ಸಭೆ ಕರೆಯಲಾಗಿದ್ದು, ಶ್ರೀಗಳು ಮಠದಲ್ಲಿ ಮತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ.

ಹೌದು, ಮಠದ ಒಳಗಿರುವವರು ಪಿತೂರಿ ಮಾಡಿದ್ದಾರೆ. ಈ ಸಮಸ್ಯೆ ಶಾಶ್ವತವಲ್ಲ ಎಂಬ ಆಡಿಯೋ ವೈರಲ್ ಆಗಿದ್ದು, ರೋಲ್‌ಕಾಲ್, ಬ್ಲ್ಯಾಕ್‌ಮೇಲ್ ತಂತ್ರದ ಮೂಲಕ ಅಧಿಕಾರ ಬೇಕು ಎಂಬ ಧೋರಣೆ ಇಲ್ಲಿ ಮುಖ್ಯವಾಗಿದೆ. ಜಗತ್ತಿನಲ್ಲಿ ಧರ್ಮಾಂಧರು, ಕಳ್ಳರು ಈ ರೀತಿ ಸನ್ನಿವೇಶ ಎದುರಿಸಿಲ್ಲ. ತಾತ್ವಿಕ ತಳಹದಿಯ ಮೇಲೆ ನಡೆದವರಿಗೆ ಕುತ್ತು ಎದುರಾಗುತ್ತದೆ. ಗಾಂಧಿ, ಬಸವಣ್ಣ ಅವರೂ ನೋವಿನ ದಿನಗಳನ್ನು ಎದುರಿಸಿದ್ದಾರೆ ಎಂದಿದ್ದಾರೆ.

ಇನ್ನು, ಏಸುಕ್ರಿಸ್ತರಿಗೆ ಶಿಲುಬೆಗೆ ಏರಿಸಿದವರು ಅದೇ ಧರ್ಮದವರು. ಪೈಗಂಬರರಿಗೆ ಕಿರುಕುಳ ನೀಡಿದವರು, ಗೌತಮ ಬುದ್ಧನಿಗೆ ಹಂದಿಯ ಮಾಂಸದ ರಸ ಉಣಿಸಿದವರು ಅದೇ ಧರ್ಮದವರು ಎಂದು ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.