ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸಾಮಾನ್ಯ ಜನರಿಗೂ ಭದ್ರತೆ ನೀಡಲು ಸಾಧ್ಯನಾ ಎಂದು ಸಂಸದ ತೇಜಸ್ವಿ ಸೂರ್ಯ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.
ಹೌದು, ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ತೇಜಸ್ವಿ ಸೂರ್ಯ ಅವರು, ಪ್ರತಿಯೊಬ್ಬರನ್ನು ರಕ್ಷಣೆ ನೀಡುವುದಕ್ಕೆ ಆಗುತ್ತಾ. ಯಾರೋ ಒಬ್ಬ ಮತಾಂಧ ದಾರಿಯಲ್ಲಿ ಹೋಗುವವರಿಗೆ ಚಾಕು ಚುಚ್ಚಿದರೆ ಸೆಕ್ಯೂರಿಟಿ ನೀಡೋಕಾಗುತ್ತಾ? ಎಂದು ಪ್ರಶ್ನಿಸಿದ್ದಾರೆ. ಕುಟುಂಬ ಸದಸ್ಯರ ಜೊತೆ ಈಗಷ್ಟೇ ಮಾತನಾಡಿ ಸಾಂತ್ವನ ಹೇಳಿದ್ದೇನೆ ಎಂದು ಇದೇ ವೇಳೆ ಹೇಳಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.