ಜಿಂದಾಲ್ ಕಾರ್ಖಾನೆಯಲ್ಲಿ ಕೋರೆಕ್ಸ್ ಅನಿಲ ಸೋರಿಕೆ ಅಣುಕು ಪ್ರದರ್ಶನ

ಬಳ್ಳಾರಿ,ಜು.29: ರಾಸಾಯನಿಕ ವಿಪತ್ತು ನಿರ್ವಹಣೆ ಅಂಗವಾಗಿ ಜಿಲ್ಲೆಯಲ್ಲಿರುವ ಅತಿ ಅಪಾಯಕಾರಿ ಕಾರ್ಖಾನೆಗಳಲ್ಲಿ ಸಂಭವಿಸಬಹುದಾದ ದುರಂತಗಳನ್ನು ತಡೆಗಟ್ಟಲು ಹಾಗೂ ಅಪಾಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸಂಡೂರು ತಾಲೂಕಿನ ತೋರಣಗಲ್ಲಿನ ಜೆಎಸ್‍ಡಬ್ಲೂ ಸ್ಟೀಲ್ ಲಿಮಿಟೆಡ್ ಕಾರ್ಖಾನೆಯಲ್ಲಿ…

ಬಳ್ಳಾರಿ,ಜು.29: ರಾಸಾಯನಿಕ ವಿಪತ್ತು ನಿರ್ವಹಣೆ ಅಂಗವಾಗಿ ಜಿಲ್ಲೆಯಲ್ಲಿರುವ ಅತಿ ಅಪಾಯಕಾರಿ ಕಾರ್ಖಾನೆಗಳಲ್ಲಿ ಸಂಭವಿಸಬಹುದಾದ ದುರಂತಗಳನ್ನು ತಡೆಗಟ್ಟಲು ಹಾಗೂ ಅಪಾಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸಂಡೂರು ತಾಲೂಕಿನ ತೋರಣಗಲ್ಲಿನ ಜೆಎಸ್‍ಡಬ್ಲೂ ಸ್ಟೀಲ್ ಲಿಮಿಟೆಡ್ ಕಾರ್ಖಾನೆಯಲ್ಲಿ ಕೋರೆಕ್ಸ್ (ಇಂಗಾಲದ ಮೋನಾಕ್ಸೈಡ್) ಸೋರಿಕೆಯ ಅಣುಕು ಪ್ರದರ್ಶನವನ್ನು ಶುಕ್ರವಾರ ಏರ್ಪಡಿಸಲಾಗಿತ್ತು.

ಬಳ್ಳಾರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ,ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಹಾಗೂ ಮೆ.ಜೆಎಸ್‍ಡಬ್ಲೂ ಸ್ಟೀಲ್ ಲಿಮಿಟೆಡ್ ಕಾರ್ಖಾನೆಯ ಸಹಯೋಗದೊಂದಿಗೆ ಈ ಅಣುಕು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜೆಎಸ್‍ಡಬ್ಲೂ ಸ್ಟೀಲ್ ಲಿಮಿಟೆಡ್ ಈ ಕಾರ್ಖಾನೆಯ ಕೋರೆಕ್ಸ್ ಅನಿಲ ಸೋರಿಕೆಯಾಗಿರುವಂತೆ ಸಂದರ್ಭವನ್ನು ಪರಿಗಣಿಸಿ ಸದರಿ ಅನಿಲ ಸೋರಿಕೆಯಿಂದ ತೊಂದರೆಗೀಡಾದ ಸುಮಾರು 22 ಕಾರ್ಮಿಕರನ್ನು ರಾಜ್ಯ ಅಗ್ನಿಶಾಮಕ ದಳದ ಸಹಯೋಗದೊಂದಿಗೆ ರಕ್ಷಿಸಿ ಸುರಕ್ಷಿತ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅಗತ್ಯವಿದ್ದಂತಹ ಕಾರ್ಮಿಕರನ್ನು ತೋರಣಗಲ್ಲಿನ ಸಂಜೀವಿನಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಯಿತು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.