ನವದೆಹಲಿ: ಇತ್ತೀಚೆಗೆ ರಾಯ್ಪುರದಲ್ಲಿ ನಡೆದ ರಸ್ತೆ ಸುರಕ್ಷತೆ ವಿಶ್ವ ಸರಣಿಯಲ್ಲಿ ಪಾಲ್ಗೊಂಡಿದ್ದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಕೂಡ ಕೊರೋನಾ ಸೋಂಕು ವಕ್ಕರಿಸಿದೆ.
ಈಗಾಗಲೇ ರಸ್ತೆ ಸುರಕ್ಷತೆ ವಿಶ್ವ ಸರಣಿಯಲ್ಲಿ ಪಾಲ್ಗೊಂಡಿದ್ದ ಸಚಿನ್ ತೆಂಡೂಲ್ಕರ್, ಯೂಸುಫ್ ಪಠಾಣ್ ಮತ್ತು ಬದ್ರಿನಾಥ್ ಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇರ್ಫಾನ್ ಪಠಾಣ್ ಕೊರೋನಾ ಸೋಂಕಿಗೆ ಒಳಗಾದ 4ನೇ ಭಾರತೀಯ ಕ್ರಿಕೆಟಿಗನಾಗಿದ್ದಾರೆ.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಇರ್ಫಾನ್ ಪಠಾಣ್, ‘ತನಗೆ ಯಾವುದೇ ಕೊರೋನಾ ಲಕ್ಷಣಗಳಿಲ್ಲ, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ’. ಇನ್ನು ನನ್ನ ಸಂಪರ್ಕಕ್ಕೆ ಬಂದ ಎಲ್ಲರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
— Irfan Pathan (@IrfanPathan) March 29, 2021