ಕರೋನ ಲಸಿಕೆ ಹಾಕಿಸಿಕೊಂಡ ಆರೋಗ್ಯ ಸಚಿವರಿಗೆ ಮತ್ತೆ ಕೊರೋನಾ ದೃಢ

ಚಂದಿಗರ್ಹ್: ಕ್ಲಿನಿಕಲ್ ಪ್ರಯೋಗದ ವೇಳೆ ಕರೋನ ಲಸಿಕೆ ಹಾಕಿಸಿಕೊಂಡ ಆರೋಗ್ಯ ಸಚಿವರಿಗೆ ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ. ನ.20ರಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಭಾರತ್ ಬಯೋಟೆಕ್ ತಯಾರಿಸಿದ ಕೊವಾಕ್ಸಿನ್ ಲಸಿಕೆ…

anil vij minister haryana vijayaprabha

ಚಂದಿಗರ್ಹ್: ಕ್ಲಿನಿಕಲ್ ಪ್ರಯೋಗದ ವೇಳೆ ಕರೋನ ಲಸಿಕೆ ಹಾಕಿಸಿಕೊಂಡ ಆರೋಗ್ಯ ಸಚಿವರಿಗೆ ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ. ನ.20ರಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಭಾರತ್ ಬಯೋಟೆಕ್ ತಯಾರಿಸಿದ ಕೊವಾಕ್ಸಿನ್ ಲಸಿಕೆ ನೀಡಲಾಗಿತ್ತು. ಇದೀಗ ಅವರಿಗೆ ಕೊರೋನಾ ಸೋಂಕು ಮತ್ತೆ ದೃಢಪಟ್ಟಿದೆ.

ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರು ಅಂಬಾಲಾ ಕ್ಯಾಂಟ್ ನ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದು, ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ನಿಕಟ ಸಂಪರ್ಕಕ್ಕೆ ಬಂದವರು ಕೊರೋನಾ ವೈರಸ್ ಪತ್ತೆ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

Vijayaprabha Mobile App free

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಜೊತೆಗೆ ಭಾರತ್ ಬಯೋಟೆಕ್ ಕಂಪನಿ ಸ್ಥಳೀಯವಾಗಿ ತಯಾರಿಸುತ್ತಿರುವ ಕೊವಾಕ್ಸಿನ್ ಲಸಿಕೆ ಒಂದು ಮತ್ತು ಎರಡನೇ ಹಂತದ ಲಸಿಕೆ ಪ್ರಯೋಗ ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಇನ್ನು ಮೂರನೇ ಹಂತದ ಲಸಿಕೆ ಪ್ರಯೋಗವನ್ನು ಪ್ರಾರಂಭಿಸಿದ್ದ ಭಾರತ್ ಬಯೋಟೆಕ್ ಕಂಪನಿ ನವಂಬರ್ ೨೦ ರಂದು ಮೊದಲ ವಾಲೆಂಟೈರ್ ಆಗಮಿಸಿದ್ದ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಕರೋನ ಲಸಿಕೆ ಹಾಕಿ ಪ್ರಯೋಗ ಪ್ರಾರಂಭಿಸಿದ್ದರು.

ಆದರೆ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಮತ್ತೆ ಕರೋನ ಸೋಂಕು ದೃಢಪಟ್ಟಿದ್ದು ಭಾರತ್ ಬಯೋಟೆಕ್ ಕಂಪನಿ ಪ್ರಾರಂಭಿಸಿದ ಮೂರನೇ ಹಂತದ ಲಸಿಕೆ ಪ್ರಯೋಗ ಮುಂದುವರೆಸುತ್ತಾರೋ ಇಲ್ಲವೋ ಕಾದು ನೋಡಬೇಕಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.