ಉಡಿಪಿ: ಉಡುಪಿ ಜಿಲ್ಲೆಯ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕ್ಯಾಂಪಸ್ ಅನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.
ಹೌದು ಕಳೆದ 2 ದಿನಗಳಲ್ಲಿ ಕ್ಯಾಂಪಸ್‌ನಲ್ಲಿ 52 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಮಂಗಳವಾರ 25 ವಿದ್ಯಾರ್ಥಿಗಳಿಗೆ & ಬುಧವಾರ 27 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆ, ಕ್ಯಾಂಪಸ್ ಅನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಇನ್ನು ರಾಜ್ಯದಲ್ಲಿ ನಿನ್ನೆ 1275 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದವು.
ಇಂದು ಆರೋಗ್ಯ ಸಚಿವರ ನೇತೃತ್ವದಲ್ಲಿ ತುರ್ತುಸಭೆ:
ಇನ್ನು ದಿನೇ ದಿನೇ ಕೊರೋನಾ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಇಂದು ಮದ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ತುರ್ತು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಇನ್ನು ಕೊರೋನಾ ನಿಯಂತ್ರಣ, ಹೆಚ್ಚಿನ ಸೌಲಭ್ಯದ ಅವಶ್ಯಕತೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿದುಬಂದಿದೆ.