ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕೇಂದ್ರ ಸರ್ಕಾರ ಆತಂಕ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರದಲ್ಲಿ ಮಾತ್ರ ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ 10 ಜಿಲ್ಲೆಗಳಲ್ಲಿ 8 ಜಿಲ್ಲೆ ಮಹಾರಾಷ್ಟ್ರದಲ್ಲಿವೆ. ಸಾವಿನ ಪ್ರಮಾಣ ಕುಸಿಯುತ್ತಿದ್ದು, ಚೇತರಿಕೆಯ ಪ್ರಮಾಣ ಹೆಚ್ಚುತ್ತಿದೆ. ಹೀಗಾಗಿ, ಜನರು ಜಾಗರೂಕರಾಗಿರಿ ಎಂದು ಸಲಹೆ ನೀಡಿದೆ. ಇನ್ನು ಇದುವರೆಗೆ ದೇಶದಲ್ಲಿ 2.56 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ರಾಜ್ಯಕ್ಕೆ ಎಚ್ಚರಿಕೆ ಗಂಟೆ ನೀಡಿದ ಆರೋಗ್ಯ ಸಚಿವ:
ಇನ್ನು ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ನಮ್ಮನ್ನು ಚಿಂತೆಗೀಡುಮಾಡಿದ್ದು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿರಿ. ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳಲ್ಲಿ ಮಾಸ್ಕ್ ಧರಿಸಿವುದು, ಅಂತರ ಕಾಪಾಡಿಕೊಳ್ಳಿ. 45 ವರ್ಷ ಮೇಲ್ಪಟ್ಟವರು ಸಹ-ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೋನಾ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಹೇಳುವ ಮೂಲಕ ರಾಜ್ಯಕ್ಕೆ ಎಚ್ಚರಿಕೆ ಸೂಚನೆ ನೀಡಿದ್ದಾರೆ.