ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಸುಮಾರು 7 ತಿಂಗಳ ಬಳಿಕ ಕರೋನ ಸೋಂಕಿತರ ಚೇತರಿಕೆಯ ಪ್ರಮಾಣ 88.81% ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 9.67% ಇದ್ದು,ಇನ್ನು ಕರೋನ ಸೋಂಕಿಗೆ ಸಾವಿನಪ್ಪಿದವರ ಪ್ರಮಾಣ 1.51% ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 61,775 ಮಂದಿ ಕರೋನ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು ದೇಶದಲ್ಲಿ 67,95,103 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಕೇವಲ 7,40,090 ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ರಾಜ್ಯದಲ್ಲಿ ನಿನ್ನೆ ಒಂದೇ ದಿನ 8500 ಜನ ಕರೋನ ಸೋಕಿನಿಂದ ಗುಣಮುಖರಾಗಿದ್ದು ಒಟ್ಟು ರಾಜ್ಯದಲ್ಲಿ ಇಲ್ಲಿಯವರೆಗೆ 6,62,329 ಜನ ಗುಣಮುಖರಾಗಿದ್ದು, ಸದ್ಯ ರಾಜ್ಯದಲ್ಲಿ 1,03,945 ಸಕ್ರಿಯ ಪ್ರಕರಣಗಳಿವೆ. ಇನ್ನು ರಾಜ್ಯದಲ್ಲಿ ಇಲ್ಲಿಯವರೆಗೆ 10608 ಜನರು ಕರೋನ ಸೋಂಕಿಗೆ ಬಲಿಯಾಗಿದ್ದಾರೆ.
ಇದನ್ನು ಓದಿ: ಮಾನವ ಚರ್ಮದ ಮೇಲೆ ಕೊರೋನಾ ವೈರಸ್ ಎಷ್ಟು ಸಮಯ ಬದುಕಿರುತ್ತದೆ…?