ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೋನಾ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮಕ್ಕೆ ಮಾಹಿತಿ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು, ನಾನು ಪ್ರಚಾರಕ್ಕೆ ಬರುವಂತೆ ರಮೇಶ್ ಜಾರಕಿಹೊಳಿ ಅವರಿಗೆ ಕರೆ ಮಾಡಿದ್ದಾಗ ಕೊರೋನಾ ಇದೆ ಎಂದು ಅವರು ಹೇಳಿರುವುದಾಗಿ ತಿಳಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಪ್ರಚಾರ ಮಾಡುವುದು ಅನುಮಾನ ಎಂದು ಅವರು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.