ಬೆಂಗಳೂರು: ಬೆಂಗಳೂರು ಗ್ರಾಮೀಣ ಭಾಗದ ಸಂಸದರಾದ ಡಿ.ಕೆ.ಸುರೆಶ್ ಅವರಿಗೆ ಕರೋನ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.ಈ ಕುರಿತು ಸ್ವತಃ ಡಿ.ಕೆ.ಸುರೆಶ್ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಡಿ.ಕೆ.ಸುರೇಶ ಅವರು “ಕರೋನ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕರೋನ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ
#Covid19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ #Corona ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ.
— DK Suresh (@DKSureshINC) October 6, 2020