ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕರೋನ ಸೋಂಕು ದೃಢಪಟ್ಟ ಬೆನ್ನಲ್ಲೇ, ಅವರ ಮಗ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಕರೋನ ಸೋಂಕು ದೃಢಪಟ್ಟಿದೆ.
ಹೌದು, ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ನಿಖಿಲ್ ಕುಮಾರಸ್ವಾಮಿ, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದು, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇನ್ನು ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.
— Nikhil Kumar (@Nikhil_Kumar_k) April 17, 2021