ಬೆಂಗಳೂರು: ರಾಜ್ಯದಲ್ಲಿ ಕೊರೊನಾರ್ಭಟ ಜೋರಾಗಿದ್ದು, ಕರೋನ ನಿಯಂತ್ರಿಸಲು ಈಗಾಗಲೇ ರಾಜ್ಯ ಸರ್ಕಾರ ಕರ್ಫ್ಯೂ ಜಾರಿ ಮಾಡಿ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಇನ್ನು ರಾಜ್ಯದ 30ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳಲ್ಲಿ 80% ಕೊರೋನಾ ಸೋಂಕಿತರಿಗೆ ಮೀಸಲಿಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, 30ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳಲ್ಲಿ 80% ಹಾಸಿಗೆಗಳು ಮಾತ್ರವಲ್ಲದೆ ಐಸಿಯುಗಳನ್ನು ಕೊರೋನಾ ಸೋಂಕಿತರಿಗೆ ವಿಸಲಿಡಬೇಕು. ಡಯಾಲಿಸಿಸ್ ರೋಗಿಗಳು, ಮದರ್ ಕೇರ್ ಕೇಂದ್ರಗಳು, ಗಂಭೀರ ಸ್ವರೂಪದ ಕಾಯಿಲೆಗಳಿಂದ ನರಳುತ್ತಿರುವ ಹಾಸಿಗೆಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಹಾಸಿಗೆಗಳನ್ನು ಕೊರೋನಾ ಸೋಂಕಿತರಿಗಾಗಿಯೇ ಕಾಯ್ದಿರಿಸಬೇಕು ಎಂದು ಹೇಳಿದ್ದಾರೆ.