ವಿಜಯನಗರ: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಕಂದಗಲ್ಲು ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ 32 ವಿದ್ಯಾರ್ಥಿಗಳು ಮತ್ತು ಓರ್ವ ಸಿಬ್ಬಂದಿ ಸೇರಿ ಒಟ್ಟು 33 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕಂದಗಲ್ಲು ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ SSLCಯ 9 ವಿದ್ಯಾರ್ಥಿಗಳು, PUCಯ 23 ವಿದ್ಯಾರ್ಥಿಗಳು & ಕಾಲೇಜಿನ ಒಬ್ಬ ಸಿಬ್ಬಂದಿಗೆ ಕೊರೋನಾ ಸೋಂಕು ವಕ್ಕರಿಸಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.