ನವದೆಹಲಿ: ದೇಶದ ಜನರಿಗೆ ಅಘಾತಕಾರಿ ಸುದ್ದಿಯೊಂದು ಎದುರಾಗಿದೆ. ಕರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಿವೆ. ಕೇವ ಲ 24 ಗಂಟೆಗಳಲ್ಲಿ 97,894 ಕರೋನ ವೈರಸ್ ಸೋಂಕುಗಳ ಪ್ರಕರಣ ದಾಖಲೆಯಾಗಿದ್ದು, 51 ಲಕ್ಷ ಗಡಿ ದಾಟಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.
ಭಾರತವು ವಿಶ್ವದ ಎರಡನೇ ಅತಿ ಹೆಚ್ಚು ಪೀಡಿತ ದೇಶವಾಗಿದೆ, ಇದೇ ರೀತಿ ಮುಂದುವರಿದರೆ ಮೊದಲ ಸ್ಥಾನದಲ್ಲಿರುವ ಅಮೆರಿಕವನ್ನು ಹಿಂದಿಕ್ಕಲಿದೆ. ಮೊದಲ ಬಾರಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಲಕ್ಷ ದಾಟಿದೆ ಎಂದು ಅಂಕಿಅಂಶಗಳು ಹೇಳುತ್ತಿವೆ. 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ ಕರೊನಾ ವೈರಸ್‌ಗೆ ಸಂಬಂಧಿಸಿರುವ 1,132 ಸಾವುಗಳನ್ನು ವರದಿಯಾಗಿವೆ, ಒಟ್ಟು ಸಾವುನೋವುಗಳ ಸಂಖ್ಯೆ 83,198 ಕ್ಕೆ ತಲುಪಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment