ಕೊಟ್ಟೂರು: ಇತ್ತೀಚಿಗಷ್ಟೇ ಮದುವೆಯಾಗಿದ್ದ ನವದಂಪತಿ ಊರಿಗೆ ಹೋಗುವ ಸಮಯದಲ್ಲಿ ಮಾರ್ಗಮಧ್ಯೆ ದುರಂತ ಅಂತ್ಯಕಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನ ಬೆನಕನಹಳ್ಳಿ ಬಳಿ ನಡೆದಿದೆ.
ಶಿವಕುಮಾರ್ ಮತ್ತು ನಿವೇದಿತಾ ಮೃತ ದುರ್ದೈವಿಗಳಾಗಿದ್ದು, ಇವರಿಬ್ಬರೂ ಬೈಕ್ನಲ್ಲಿ ಇಂದು ಬೆಳಗ್ಗೆ ಜಗಳೂರು ತಾಲೂಕಿನ ಹೊಸಕೆರೆಯಿಂದ ಸಂಡೂರಿಗೆ ಹೊರಟಿದ್ದರು. ಈ ವೇಳೆ ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನ ಬೆನಕನಹಳ್ಳಿ ಬಳಿ ಎತ್ತಿನ ಬಂಡಿಗೆ ಬೈಕ್ ಡಿಕ್ಕಿಯಾದ ಪರಿಣಾಮ ನವದಂಪತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



