ಲಖನೌ : ಕೊರೋನಾ ಲಸಿಕೆ ಕೋವಿಶೀಲ್ಡ್ ನ ಮೊದಲ ಡೋಸ್ ಪಡೆದಿದ್ದವರಿಗೆ 2ನೇ ಡೋಸ್ ಆಗಿ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ.
ಹೌದು, ಆರೋಗ್ಯ ಕಾರ್ಯಕರ್ತರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎನ್ನಲಾಗಿದ್ದು, ಈ ಮೊದಲೇ ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದ 20 ಜನರಿಗೆ 2ನೇ ಡೋಸ್ ಆಗಿ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದ್ದು, ಲಸಿಕೆಯ ಈ ಕಾಕ್ ಟೇಲ್ ನಿಂದಾಗಿ ಜನರಲ್ಲಿ ಭೀತಿ ಉಂಟಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.