ಬಾಗಲಕೋಟೆ: ಸ್ಮಶಾನಕ್ಕೆ ಜಾಗ ಇಲ್ಲದೇ ಪಂಚಾಯಿತಿ ಮುಂದೆಯೇ ಶವ ಸಂಸ್ಕಾರ ಮಾಡಲು ಗ್ರಾಮಸ್ಥರು ಮುಂದಾದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದಲ್ಲಿ ನಡೆದಿದೆ.
ಹೌದು, ಕಳೆದ ಹಲವು ದಿನಗಳಿಂದ ಸ್ಮಶಾನಕ್ಕಾಗಿ ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲವಂತೆ. ಈ ನಡುವೆ, ಕಾಳಪ್ಪ ಕಂಬಾರ ಎಂಬ ವ್ಯಕ್ತಿ ಅಸಹಜವಾಗಿ ಮೃತಪಟ್ಟಿದ್ದು ಅವರ ಶವಸಂಸ್ಕಾರ ಮಾಡಲು ಸ್ಥಳವಿಲ್ಲದೆ ಆಕ್ರೋಶಗೊಂಡ ಗ್ರಾಮಸ್ಥರು ಪಂಚಾಯಿತಿ ಮುಂದೆಯೇ ಅಂತ್ಯಸಂಸ್ಕಾರ ಮಾಡಲು ಮುಂದಾದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.