ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಖ್ಯಾತ ಕ್ರಿಕೆಟರ್..!

ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಮುರಳಿ ವಿಜಯ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡದ ವಿಜಯ್ ಕೊನೆಯ ಬಾರಿಗೆ ಭಾರತಕ್ಕಾಗಿ ಡಿಸೆಂಬರ್ 2018 ರಲ್ಲಿ ಆಸ್ಟ್ರೇಲಿಯಾ…

Murali Vijay

ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಮುರಳಿ ವಿಜಯ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡದ ವಿಜಯ್ ಕೊನೆಯ ಬಾರಿಗೆ ಭಾರತಕ್ಕಾಗಿ ಡಿಸೆಂಬರ್ 2018 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಆಡಿದ್ದರು.

ಇನ್ನು, 2015 ರಿಂದ ಏಕದಿನ ಅಥವಾ ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ವಿಜಯ್ ಪ್ರತಿನಿಧಿಸಿಲ್ಲ. ವಿಜಯ್ ಕೊನೆಯ ಬಾರಿಗೆ ಸೆಪ್ಟೆಂಬರ್ 2020ರಲ್ಲಿ IPL ಆಡಿದ್ದರು. ಮುರಳಿ ವಿಜಯ್ ಇಲ್ಲಿಯವರೆಗೆ ಟೆಸ್ಟ್‌ನಲ್ಲಿ 61 ಪಂದ್ಯಗಳಲ್ಲಿ 12 ಶತಕ ಮತ್ತು 15 ಅರ್ಧ ಶತಕಗಳೊಂದಿಗೆ 3982 ರನ್, ODIಗಳಲ್ಲಿ 17 ಪಂದ್ಯಗಳಲ್ಲಿ 339 ರನ್ ಮತ್ತು T20 ನಲ್ಲಿ 9 ಪಂದ್ಯಗಳಲ್ಲಿ 169 ರನ್ ಗಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.