ಪಾಟ್ನಾ: ವೇಗವಾಗಿ ಬಂದ ಸ್ಕಾರ್ಪಿಯೋ ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕಾರ್ಪಿಯೋದಲ್ಲಿದ್ದ ಒಂದೇ ಕುಟುಂಬದ 6 ಜನರು ಮತ್ತು ಚಾಲಕ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ.
ಕತಿಹಾರ್ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ಈ ಅಪಘಾತ ಸಂಭವಿಸಿದ್ದು, ಈ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ರೂಸರ್ ಚಾಲಕ ವೇಗವಾಗಿ ಬಂದು ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಕ್ರೂಸರ್ ಮೂವರು ಮಕ್ಕಳು ಸೇರಿದಂತೆ ಒಟ್ಟು 10 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ
ಇನ್ನು ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಕುರ್ಷೇಲಾದ ಹೆಲ್ತ್ ಕೇರ್ ಸೆಂಟರ್‍ಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಇನ್ನು ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bihar: Six people dead, three injured in a collision between a truck and an SUV car on National Highway 31 in Katihar’s Kursela
— ANI (@ANI) February 23, 2021