ಮಂಡ್ಯ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಭಾಗವಹಿಸುವ ಸಾಧ್ಯತೆ ಇದೆ.
ಸಾಹಿತ್ಯದ್ದಲಿ ರಾಜಕೀಯ, ರಾಜಕೀಯದಲ್ಲಿ ಸಾಹಿತ್ಯ ವಿಷಯ ಕುರಿತಾದ 4ನೇ ಗೋಷ್ಠಿಯಲ್ಲಿ ಸಿ.ಟಿ. ರವಿ ವಿಷಯ ಮಂಡಿಸಲಿದ್ದಾರೆ. ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಇಂದು 2.3. ರವಿ ಭಾಗವಹಿಸಲಿದ್ದು, ಸಾಹಿತ್ಯ ಕೇಂದ್ರಿತವಾದ ಸೈದ್ದಂತಿಕ ರಾಜಕೀಯ ನಿಲುವುಗಳು ಕುರಿತು ಇಂದು ಬೆಳಗ್ಗೆ 11 ರಿಂದ 12:30 ರವರೆಗೆ ಗೋಷ್ಠಿ ನಡೆಯಲಿದೆ.
ಮೇಲ್ಮನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಳಗಾವಿ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧಿಸಿದ್ದರು. ನಂತರ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಕರೆತರುವ ಮಾರ್ಗ ಮಧ್ಯದಲ್ಲಿಯೇ ಬಿಡುಗಡೆ ಮಾಡಲಾಗಿತ್ತು. ಬೆಂಗಳೂರಿಗೆ ಆಗಮಿಸಿರುವ ಸಿ.ಟಿ. ರವಿ ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರರ ಮಂಡ್ಯಕ್ಕೆ ತೆರಳಿ ಸಮ್ಮೇಳನದ ಗೋಷ್ಠಿಯಲ್ಲಿ ಭಾಗವಹಿಸಿ ವಿಷಯ ಮಂಡಿಸಲಿದ್ದಾರೆ ಎಂದು ಹೇಳಲಾಗಿದೆ.