Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಹಿಂದೂ ಮಹಾಸಾಗರದಲ್ಲಿ ಫೆಂಗಲ್ ಚಂಡಮಾರುತದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ಚಂಡಮಾರುತದ ರೂಪ ತಾಳಿದ್ದು, ‘ಫೆಂಗಲ್’ ಸೈಕ್ಲೋನ್ ನಾಳೆ ಕರಾವಳಿಗೆ ಅಪ್ಪಳಿಸಲಿದೆ. ಪರಿಣಾಮ ತಮಿಳುನಾಡಿನಲ್ಲಿ ಡಿ. 1ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ತಾಪಮಾನ ಸಹ 3-4 ಡಿಗ್ರಿ ಸೆ. ಕಡಿಮೆಯಾಗಲಿದೆ. ಕೋಲಾರ, ಚಿಕ್ಕಮಗಳೂರು, ಮೈಸೂರು, ರಾಮನಗರ, ದಕ್ಷಿಣ ಒಳನಾಡು ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ.