Cyclone Fengal : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗು ಫೆಂಗಲ್ ಚಂಡಮಾರುತ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಫೆಂಗಲ್ ಚಂಡಮಾರುದ ಅಬ್ಬರ ಮುದುವರೆದಿದ್ದು, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಇದನ್ನೂ ಓದಿ: De-link | ನೀವು ಮನೆ ಬದಲಿಸಿದ್ದೀರಾ? ಗೃಹಜ್ಯೋತಿ ಹಳೆ ಖಾತೆ ಸಂಖ್ಯೆ ಡಿ ಲಿಂಕ್ ಹೀಗೆ ಮಾಡಿ!
ಇನ್ನು ಬೆಂಗಳೂರು, ಹಾಸನ, ಮಂಡ್ಯ & ರಾಮನಗರ ಜಿಲ್ಲೆಗಳಿಗೆ ಮುಂದಿನ 2 ದಿನ ಭಾರೀ ನಳೆಯಾಗಲಿದೆ ಎಂದು ತಿಳಿಸಿದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉಡುಪಿ, ಚಿಕ್ಕಮಗಳೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
Cyclone Fengal : ತಮಿಳುನಾಡು-ಪುದುಚ್ಚೆರಿಯಲ್ಲಿ ಜಲ ಪ್ರಳಯ
ಫೆಂಗಲ್ ತೂಫಾನ್ ತಮಿಳುನಾಡು-ಪುದುಚ್ಚೆರಿಯಲ್ಲಿ ಜಲ ಪ್ರಳಯವನ್ನೇ ಸೃಷ್ಟಿಸಿದ್ದು, ಬರೋಬ್ಬರಿ 17 ಗಂಟೆ ಸಮಯ ಅಲ್ಲೇ ಕೇಂದ್ರೀಕೃತವಾದ ಫೆಂಗಲ್ ಭಾರೀ ಅನಾಹುತವನ್ನೇ ಸೃಷ್ಟಿಸಿದೆ.
ಗಂಟೆಗೆ 90 ಕಿಮೀ ವೇಗದಲ್ಲಿ ಬೀಸಿದ ರಣಗಾಳಿಗೆ ಮಳೆ ಜೊತೆಯಾದ ಪರಿಣಾಮ ಪುದುಚ್ಚೆರಿ ಅಲ್ಲೋಲ ಕಲ್ಲೋಲ ಪರಿಸ್ಥಿತಿ ನಿರ್ಮಾಣವಾಗಿದ್ದು, 510 ಮಿ.ಮೀಟರ್ ಮಳೆಗೆ ರಸ್ತೆ, ಕಾಲನಿ ಜಲಾವೃತವಾಗಿದ್ದು, ವಾಹನಗಳು ಮುಳುಗಡೆ ಆಗಿವೆ. ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಕಳೆದ ಮೂವತ್ತು ವರ್ಷಗಳಲ್ಲಿಯೇ ಕಂಡುಕೇಳರಿಯದ ರೀತಿಯಲ್ಲಿ ದಾಖಲೆಯ ಮಳೆಯಾಗಿದೆ.