Heavy rain : ಫೆಂಗಲ್ ಚಂಡಮಾರುತದ ಎಫೆಕ್ಟ್ ಇಂದು ಸಹ ಕರ್ನಾಟಕದಲ್ಲಿ ಮುಂದುವರಿಯಲಿದ್ದು, ರಾಜ್ಯದ ಕೆಲ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಕರಾವಳಿಯಲ್ಲಿ ಈಗಾಗಲೇ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: Cyclone Fengal : ಫೆಂಗಲ್ ಎಫೆಕ್ಟ್ ರಾಜ್ಯದಲ್ಲೂ ವರುಣಾರ್ಭಟ; ಮುಂದಿನ ಮೂರೂ ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ
ಇನ್ನು, ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಕಂಟ್ರೋಲ್ ರೂಂ ತೆರೆದಿದ್ದು, ಸಹಾಯಕ್ಕಾಗಿ ಕಂಟ್ರೋಲ್ ರೂಂ ನಂಬರ್ 08262 238950ಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ.
Heavy rain : ಬೆಂಗಳೂರಿನಲ್ಲಿ ಫೆಂಗಲ್ ಚಂಡಮಾರುತ ಆರ್ಭಟ: ಹಲವೆಡೆ ಟ್ರಾಫಿಕ್ ಜಾಮ್
ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ನಗರದಲ್ಲಿ ಸಾಧಾರಣದಿಂದ ತೀವ್ರ ಮಳೆಯಾಗುತ್ತಿದ್ದು ದಿನವಿಡೀ ಮುಂದುವರಿಯುವ ನಿರೀಕ್ಷೆಯಿದೆ. ತಗ್ಗು ಪ್ರದೇಶಗಳಲ್ಲಿ ಸ್ಥಳೀಯವಾಗಿ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಭಾರಿ ವೇಗವಾಗಿ ಗಾಳಿ ಬೀಸುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಕೃಪೆ: Tv9 Kannada