ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಯಲ್ಲಿ ನಡೆದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ, ಜಿಲ್ಲೆಯಲ್ಲಿ ಇಂದು ಸಂಜೆ 6 ಗಂಟೆಯಿಂದ ಸೋಮವಾರದವರೆಗೆ ರಾತ್ರಿ ವೇಳೆ ಅಂಗಡಿ-ಮುಂಗಟ್ಟು ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹೌದು, ಈ ಆದೇಶ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗಡಿ-ಮುಂಗಟ್ಟು ಮುಚ್ಚುವಂತೆ ಸೂಚಿಸಲಾಗಿದೆ. ಜನರ ಓಡಾಟಕ್ಕೂ ನಿರ್ಬಂಧ ವಿಧಿಸಲಾಗಿದೆ. ಆದರೆ, ತುರ್ತು ಸೇವೆ, ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.