ಲಖನೌ: ಕೆಲಸದ ನಿಮಿತ್ತ ಹೊರ ಬಂದಿದ್ದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದ್ದು, ಮಾನವೀಯ ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಇನ್ನೋರ್ವ ಆರೋಪಿ ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು, ಕಾಲಿಗೆ ಗುಂಡೇಟು ಹೊಡೆದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಹೊರ ಹೋಗಿದ್ದಾಗ ಅಪರಿಚಿತರು ಹೊತ್ತೊಯ್ದು ಅತ್ಯಚಾರ ಎಸಗಿದ್ದು, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿ ಜಮೀನಿನಲ್ಲಿ ಶವ ಎಸೆದು ಪರಾರಿಯಾಗಿದ್ದರು.
ಇನ್ನು, ಬಾಲಕಿಯ ತಂದೆಯ ದೂರಿನ ಮೇರೆಗೆ ಹುಡುಕಾಟ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಶವವನ್ನ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅತ್ಯಾಚಾರ ನಡೆದಿರುವುದು ಸಾಬೀತಾಗಿದ್ದು, ಬಂಧಿತರಲ್ಲಿ ಓರ್ವ ಹುಡುಗಿಗೆ ಪರಿಚಿತನಾಗಿದ್ದಾನೆ ಇನ್ನಿಬ್ಬರು ಪಕ್ಕದೂರಿನವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.