Actor Darshan: ವಿಮ್ಸ್ ಆಸ್ಪತ್ರೆಯಲ್ಲಿ ‘ದಾಸ’ನಿಗೆ MRI ಸ್ಕ್ಯಾನಿಂಗ್

ಬಳ್ಳಾರಿ: ಕಳೆದ ಹಲವು ದಿನಗಳಿಂದ ಬೆನ್ನುನೋವಿನಿಂದ ಬಳಲುತ್ತಿರುವ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಮಾಡಿಸಲಾಗಿದೆ. ಬಿಗಿ ಭದ್ರತೆ ನಡುವೆ ದರ್ಶನ್‌ರನ್ನು ಆಸ್ಪತ್ರೆಗೆ ಕರೆದೊಯ್ದು…

ಬಳ್ಳಾರಿ: ಕಳೆದ ಹಲವು ದಿನಗಳಿಂದ ಬೆನ್ನುನೋವಿನಿಂದ ಬಳಲುತ್ತಿರುವ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಮಾಡಿಸಲಾಗಿದೆ. ಬಿಗಿ ಭದ್ರತೆ ನಡುವೆ ದರ್ಶನ್‌ರನ್ನು ಆಸ್ಪತ್ರೆಗೆ ಕರೆದೊಯ್ದು ಜೈಲು ಅಧಿಕಾರಿಗಳು ಸ್ಕ್ಯಾನಿಂಗ್ ಮಾಡಿಸಿ ರಾತ್ರಿ ಜೈಲಿಗೆ ವಾಪಸ್ ಕರೆತಂದರು.

ನಟ ದರ್ಶನ್‌ಗೆ ಕಳೆದ ಕೆಲ ದಿನಗಳಿಂದ ತೀವ್ರ ಬೆನ್ನುನೋವು ಕಾಣಿಸಿಕೊಳ್ಳುತ್ತಿದ್ದು, ಜೈಲಿಗೆ ಆಗಮಿಸಿ ವೈದ್ಯರು ತಪಾಸಣೆ ನಡೆಸಿ ತೆರಳಿದ್ದರು. ಆದರೆ ಬೆನ್ನುನೋವು ಹೆಚ್ಚಾಗಿದ್ದ ಹಿನ್ನಲೆ ವಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ವೈದ್ಯರು ಸೂಚಿಸಿದ್ದರು. ವೈದ್ಯರ ಸಲಹೆಯಂತೆ ಬಳ್ಳಾರಿಯಲ್ಲೇ ಎಂಆರ್‌ಐ ಸ್ಕ್ಯಾನಿಂಗ್‌ ಮಾಡಿಸಿಕೊಳ್ಳಲು ದರ್ಶನ್ ಒಪ್ಪಿಕೊಂಡಿದ್ದು, ಜೈಲು ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ದರ್ಶನ್‌ರನ್ನು ವಿಮ್ಸ್ ಆಸ್ಪತ್ರೆಗೆ ಕರೆತಂದಿದ್ದರು.

ಆಸ್ಪತ್ರೆಗೆ ದಾಖಲಾಗಿದ್ದ ದರ್ಶನ್‌ಗೆ ಸುಮಾರು ಒಂದು ಗಂಟೆಗಳ ಕಾಲ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನಿಂಗ್ ಮಾಡಲಾಗಿದ್ದು, ಈ ವೇಳೆ ಜಿಲ್ಲಾ ಸರ್ಜನ್ ಡಾ.ಬಸಾರೆಡ್ಡಿ ಹಾಗೂ ನ್ಯೂರೋ ಸರ್ಜನ್ ಡಾ.ವಿಶ್ವನಾಥ ಉಪಸ್ಥಿತರಿದ್ದರು. ಜೊತೆಗೆ ನಟ ಧನ್ವೀರ್ ಸಹ ಜೊತೆಗಿದ್ದು ದರ್ಶನ್‌ಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು. ತಪಾಸಣೆ ನಡೆದ ಬಳಿಕ ದರ್ಶನ್‌ರನ್ನು ಜೈಲಿಗೆ ವಾಪಾಸ್ ಕರೆತರಲಾಯಿತು.

Vijayaprabha Mobile App free

ಇನ್ನು ದರ್ಶನ್‌ರನ್ನು ಆಸ್ಪತ್ರೆಗೆ ಕರೆತಂದಿದ್ದ ಹಿನ್ನಲೆ ವಿಮ್ಸ್ ಆಸ್ಪತ್ರೆ ಬಳಿ ದರ್ಶನ್ ಅಭಿಮಾನಿಗಳು ಜಮಾಯಿಸಿದ್ದರು. ಆಸ್ಪತ್ರೆ ಬಳಿ ಪೊಲೀಸರು ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಿದ್ದು ಅಭಿಮಾನಿಗಳಿಂದ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.