ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರಾದ ಬೆನ್ನಲ್ಲೇ ರೇಣುಕಾಸ್ವಾಮಿ ಕುಟುಂಬಸ್ಥರು ಮನೆ ದೇವರ ಮೊರೆ ಹೋಗಿದ್ದಾರೆ. ಇಂದು ದರ್ಶನ್‌ರ ಬೇಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ 6 ವಾರಗಳ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇದರಿಂದ ಬೇಸರಗೊಂಡ ರೇಣುಕಾಸ್ವಾಮಿ ಕುಟುಂಬಸ್ಥರು ಇದೀಗ ದೇವಸ್ಥಾನಕ್ಕೆ ತೆರಳಿದ್ದಾರೆ.
ರೇಣುಕಾಸ್ವಾಮಿ ತಂದೆ ಶಿವನಗೌಡರ್, ತಾಯಿ ರತ್ನಪ್ರಭ, ಮಗಳು ಸುಚೇತ ಸೇರಿ ಮನೆ ದೇವರಾದ ಹಾವೇರಿ ಜಿಲ್ಲೆಯ ಕುರುವತ್ತಿ ಬಸವೇಶ್ವರ ದೇವಸ್ಥಾನಕ್ಕೆ ತೆರಳಿದ್ದಾರೆ. ರೇಣುಕಾಸ್ವಾಮಿ ಹತ್ಯೆಯಿಂದ ನೊಂದಿದ್ದ ಕುಟುಂಬ ಮಾನಸಿಕ ನೆಮ್ಮದಿಗಾಗಿ ಮನೆ ದೇವರ ದರ್ಶನಕ್ಕೆ ತೆರಳಿದೆ.
ನಟ ದರ್ಶನ್ ಪ್ರಭಾವಿ ವ್ಯಕ್ತಿಯಾಗಿರುವ ಹಿನ್ನಲೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಆತಂಕವಿದ್ದು, ದರ್ಶನ್‌ಗೆ ಬೇಲ್ ನೀಡದಂತೆ ರೇಣುಕಾಸ್ವಾಮಿ ಕುಟುಂಬ ಈ ಹಿಂದೆ ಮನವಿ ಮಾಡಿತ್ತು. ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ದರ್ಶನ್ ಗೆ 6 ವಾರಗಳ ಕಾಲ ಮದ್ಯಂತರ ಜಾಮೀನು ಮಂಜೂರು ಮಾಡಿದ್ದು, ರೇಣುಕಾಸ್ವಾಮಿ ಕುಟುಂಬಸ್ಥರ ಬೇಸರಕ್ಕೆ ಕಾರಣವಾಗಿದೆ.