ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಇಂದು FDA ಪರೀಕ್ಷೆ ದಿನಾಂಕವನ್ನು ಮರು ನಿಗದಿಪಡಿಸಿ ಆದೇಶಿಸಿದೆ. ಹೌದು, ಈ ಸಂಬಂಧ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆಯೋಗದ ಕಾರ್ಯದರ್ಶಿ ಸತ್ಯವತಿ, ಪರೀಕ್ಷೆಯನ್ನು ಫೆ.28ರ ಭಾನುವಾರದಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಪರೀಕ್ಷೆಯನ್ನು ಈ ಹಿಂದೆ ಜ.24ರಂದು ನಡೆಸುವುದಾಗಿ ದಿನಾಂಕ ಪ್ರಕಟಿಸಲಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಆಯೋಗವು ಪರೀಕ್ಷೆಯನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡಿತ್ತು. ಈಗ ಇದೆ ತಿಂಗಳು ಫೆಬ್ರುವರಿ 28ರ ಭಾನುವಾರದಂದು ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗವು ಆದೇಶ ಹೊರಡಿಸಿದೆ.
ಅಧಿಕೃತ ಪತ್ರಿಕಾ ಪ್ರಕಟಣೆ ನೋಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ.