ಬೆಂಗಳೂರು : ಹೈಕೋರ್ಟ್ ನಿರ್ದೇಶನದಂತೆ ರಾಜ್ಯದ 5764 ಗ್ರಾ.ಪಂ.ಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಕೊರೋನಾ ಸೋಂಕಿನ ಭೀತಿಯ ಹಿನ್ನಲೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಒಂದು ಸಾವಿರ ಮತದಾರರಿಗೆ ಒಂದು ಮತಗಟ್ಟೆ ಸ್ಥಾಪಿಸಲು ಸೂಚನೆ ನೀಡಲಾಗಿದ್ದು ಮುಂದಿನ ತಿಂಗಳು ಡಿ.22ರಂದು ಮೊದಲನೇ ಹಂತ ಚುನಾವಣೆ ಹಾಗು ಎರಡನೇ ಹಂತದಲ್ಲಿ ಡಿ.27ರಂದು ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಘೋಷಿಣೆ ತಿಳಿಸಿದೆ.
ಇನ್ನು ಡಿ.30 ರಂದು ಗ್ರಾಮ ಪಂಚಾಯಿತಿ ಫಲಿತಾಂಶ ಹೊರ ಬೀಳುವ ಮೂಲಕ ಗ್ರಾಮಗಳ ಮತ ಸಮರಕ್ಕೆ ತೆರೆಬೀಳಲಿದೆ. ಮೊದಲ ಹಂತದ ಚುನಾವಣೆಗೆ ಡಿ.7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇದನ್ನು ಓದಿ: ಈ ಎಲ್‌ಐಸಿ ಪಾಲಿಸಿಯೊಂದಿಗೆ ನೀವು ಬದುಕಿರುವವರೆಗೂ ತಿಂಗಳಿಗೆ 3,500 ರೂ ಪಡೆಯಬಹುದು!