ರಾಜ್ಯದಲ್ಲಿ ಮೇ 2ನೇ ವಾರದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ. ಹಾಲಿ ವಿಧಾನಸಭೆ ಅವಧಿ ಮೇ 24ಕ್ಕೆ ಕೊನೆಗೊಳ್ಳಲಿದ್ದು ಅಷ್ಟರೊಳಗೆ ಚುನಾವಣೆ ನಡೆಯಬೇಕು.
2018ರಲ್ಲಿಯೂ ಮೇ 12ಕ್ಕೆ ಮತದಾನವಾಗಿದ್ದು, ಈ ಬಾರಿಯೂ ಅದೇ ಸಮಯದಲ್ಲಿ ಮತದಾನ ನಡೆಸುವುದಕ್ಕೆ ಚುನಾವಣೆ ಆಯೋಗ ಲೆಕ್ಕಾಚಾರ ಹಾಕಿಕೊಂಡಿದೆ. ಅಂತಿಮ ಮತದಾರರ ಪಟ್ಟಿ ಸಿದ್ಧಪಡಿಸಿಕೊಂಡಿರುವ ಚುನಾವಣೆ ಆಯೋಗ ಈಗ EVMಗಳ ಮೊದಲ ಹಂತದ ತಪಾಸಣೆ ಕಾರ್ಯ ಕೂಡ ಆರಂಭಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.