ಬೆಂಗಳೂರು: ‘ದಾವಣಗೆರೆ ಎಕ್ಸ್‌ಪ್ರೆಸ್’ ಖ್ಯಾತಿಯ ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ನಾಯಕ, ಕನ್ನಡಿಗ ವಿನಯ್ ಕುಮಾರ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನಾನು ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದೇನೆ’ ಎಂದಿದ್ದಾರೆ. ಕನ್ನಡಿಗ ವಿನಯ್ ಕುಮಾರ್ ಭಾರತದ ಪರ 1 ಟೆಸ್ಟ್, 31 ಏಕದಿನ ಹಾಗೂ 9 ಟಿ20 ಪಂದ್ಯಗಳನ್ನಾಡಿರುವ ಅವರು ಒಟ್ಟು 49 ವಿಕೆಟ್ ಪಡೆದಿದ್ದಾರೆ. ವಿನಯ್ ಕುಮಾರ್ ರಣಜಿಯಲ್ಲಿ ಕರ್ನಾಟಕ ತಂಡಕ್ಕೆ 2 ಟ್ರೋಫಿ ದೊರಕಿಸಿ ಕೊಟ್ಟಿದ್ದಾರೆ. ಐಪಿಎಲ್ ನಲ್ಲಿ 105 ಪಂದ್ಯಗಳನ್ನಾಡಿದ್ದು 105 ವಿಕೆಟ್ ಗಳನ್ನು ಪಡೆದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.