ವಸತಿ ಸಮುಚ್ಛಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ ಅಶ್ವಥ್ ನಾರಾಯಣ್

ಬೆಂಗಳೂರು: ಉಪಮುಖ್ಯಮಂತ್ರಿ ಶ್ರೀ ಅಶ್ವಥ್ ನಾರಾಯಣ್ ಅವರು ಇಂದು ಹಾರ್ವರ್ಡ್ ಇಂಡಿಯಾ ಕಾನ್ಫರೆನ್ಸ್ ನ ‘ಭವಿಷ್ಯದಲ್ಲಿ ಸುಸ್ಥಿರ ಸಾರಿಗೆ’ ಗೋಷ್ಠಿಯಲ್ಲಿ ಪಾಲ್ಗೊಂಡು, ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ವಸತಿ ಸಮುಚ್ಛಯ ಮೊದಲಾದ ದೊಡ್ಡ ಕಟ್ಟಡದಲ್ಲಿ…

ashwath narayan vijayaprabha

ಬೆಂಗಳೂರು: ಉಪಮುಖ್ಯಮಂತ್ರಿ ಶ್ರೀ ಅಶ್ವಥ್ ನಾರಾಯಣ್ ಅವರು ಇಂದು ಹಾರ್ವರ್ಡ್ ಇಂಡಿಯಾ ಕಾನ್ಫರೆನ್ಸ್ ನ ‘ಭವಿಷ್ಯದಲ್ಲಿ ಸುಸ್ಥಿರ ಸಾರಿಗೆ’ ಗೋಷ್ಠಿಯಲ್ಲಿ ಪಾಲ್ಗೊಂಡು, ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ವಸತಿ ಸಮುಚ್ಛಯ ಮೊದಲಾದ ದೊಡ್ಡ ಕಟ್ಟಡದಲ್ಲಿ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯಗೊಳಿಸಲಾಗುವುದು ಎಂದು ತಿಳಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಅಶ್ವಥ್ ನಾರಾಯಣ್ ಅವರು, ‘ಭವಿಷ್ಯದ ಸಂಚಾರಿ ವ್ಯವಸ್ಥೆ’ ಕುರಿತು ಹಾರ್ವರ್ಡ್ ಇಂಡಿಯಾ ವತಿಯಿಂದ ನಡೆದ ವರ್ಚುಯಲ್ ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡೆ.

ಇಲೆಕ್ಟ್ರಿಕ್-ಪರಿಸರಸ್ನೇಹಿ ಸಂಚಾರ ವ್ಯವಸ್ಥೆಯ ಕಾರ್ಯನೀತಿಯನ್ನು ರೂಪಿಸುವಲ್ಲಿ ಹಾಗೂ ಪೂರಕ ವಾತಾವರಣ ಕಲ್ಪಿಸುವಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ. ಇದಕ್ಕೆ ಬೇಕಾದ ಅಗತ್ಯ ಬೆಂಬಲ ನೀಡಲು ಸರ್ಕಾರ ಸದಾ ಬದ್ಧ.

Vijayaprabha Mobile App free

ರಾಜ್ಯದ ವಿವಿಧ ಪ್ರದೇಶಗಳಲ್ಲಿ ಇಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲು ಹಾಗೂ ಜನತೆಯಲ್ಲಿ ಇಂತಹ ಸಂಚಾರಿ ವ್ಯವಸ್ಥೆಯ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾವು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.