ಈ ಸನ್ಮಾನ ನನಗಲ್ಲ ಸರ್ಕಾರಕ್ಕೆ; ಗ್ರಾಮಸ್ಥರು ಸಮರ್ಪಿಸಿದ್ದ 140 ಗ್ರಾಂ ‘ಚಿನ್ನದ ಕಿರೀಟ’ವನ್ನು ಸರ್ಕಾರಕ್ಕೆ ಒಪ್ಪಿಸಿದ ಡಿಸಿಎಂ ಕಾರಜೋಳ

ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮದಸ್ಥರು ಸಮರ್ಪಿಸಿದ್ದ 140 ಗ್ರಾಂ ಬಂಗಾರದ ಕಿರೀಟವನ್ನು ಡಿಸಿಎಂ ಗೋವಿಂದ ಕಾರಜೋಳ ಅವರು ಸರ್ಕಾರಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಡಿಸಿಎಂ ಗೋವಿಂದ ಕಾರಜೋಳ ಅವರು ಟ್ವೀಟ್…

govind karjol vijayaprabha

ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮದಸ್ಥರು ಸಮರ್ಪಿಸಿದ್ದ 140 ಗ್ರಾಂ ಬಂಗಾರದ ಕಿರೀಟವನ್ನು ಡಿಸಿಎಂ ಗೋವಿಂದ ಕಾರಜೋಳ ಅವರು ಸರ್ಕಾರಕ್ಕೆ ಒಪ್ಪಿಸಿದ್ದಾರೆ.

ಈ ಕುರಿತು ಡಿಸಿಎಂ ಗೋವಿಂದ ಕಾರಜೋಳ ಅವರು ಟ್ವೀಟ್ ಮಾಡಿದ್ದೂ, ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮದಸ್ಥರು ಸಮರ್ಪಿಸಿದ್ದ ಬಂಗಾರದ ಕಿರೀಟವನ್ನು ಇಂದು ಮುಖ್ಯಕಾರ್ಯದರ್ಶಿಯರ ಮೂಲಕ ಸರ್ಕಾರಕ್ಕೆ ಒಪ್ಪಿಸಿದೆ. ನನ್ನ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು.

ಕಾರಜೋಳ ಗ್ರಾಮದ ಅಭಿವೃದ್ಧಿ ಗಾಗಿ ರೂಪಿಸಿ ಅನುಷ್ಟಾನ ಗೊಳಿಸಿದ ಯೋಜನೆಗಳು, ನೀರಾವರಿ ಯೋಜನೆಗಳ ಅನುಷ್ಟಾನ, ಗ್ರಾಮದ ಮನೆಯ ಮಗನು ಉಪಮುಖ್ಯಮಂತ್ರಿಯಾಗಿರುವುದಕ್ಕೆ ಅತ್ಯಂತ ‌ಪ್ರೀತಿ ಗೌರವದಿಂದ ಗ್ರಾಮಸ್ಥರು ಸನ್ಮಾನಿಸಿದ್ದರು. ಕಳೆದ 6ವರ್ಷಗಳಿಂದ ಸನ್ಮಾನ ಮಾಡಲು ಪ್ರಯತ್ನಿಸುತ್ತಿದ್ದರು.

Vijayaprabha Mobile App free

ಕಾರಜೋಳ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಒತ್ತಾಯ ಪೂರ್ವಕವಾಗಿ‌ ಸನ್ಮಾನಿಸಿ, ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು. ಶಾಸಕ, ಸಚಿವರಾಗಿ ಸಲ್ಲಿಸಿದ ಸೇವೆಗಾಗಿ ಮಾಡಿದ ಸನ್ಮಾನ ಸರ್ಕಾರಕ್ಕೆ ಸಲ್ಲಬೇಕು. ಹೀಗಾಗಿ ಈ ಬಂಗಾರದ ಕಿರೀಟವನ್ನು ಸರ್ಕಾರಕ್ಕೆ ಒಪ್ಪಿಸಿದೆ ಎಂದು ಡಿಸಿಎಂ ಕಾರಜೋಳ ಅವರು ಹೇಳಿದ್ದಾರೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.