ಹರಪನಹಳ್ಳಿ: ಅನುಮಾನಾಸ್ಪದ ರೀತಿಯಲ್ಲಿ ಬೆಸ್ಕಾಂ ನೌಕರ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕು ಅರಸೀಕೆರೆ ಗ್ರಾಮದಲ್ಲಿ ನಡೆದಿದೆ. ಹೌದು ಲೈನ್ ಮ್ಯಾನ್ ರಮೇಶ್ ಎಂಬುವರು ಮೃತ ದುರ್ದೈವಿಯಾಗಿದ್ದು, ಅರಸೀಕೆರೆಯ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ಕೆರೆಯ ಹತ್ತಿರ ಇರುವ ಬಾವಿಯಲ್ಲಿ ನಿನ್ನೆ ಶವವಾಗಿ ಪತ್ತೆಯಾಗಿದ್ದಾನೆ.
ಇನ್ನು ವಿಚಾರ ತಿಳಿದು ಸಂಜೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಹೊರತೆಗೆಯಲು ಅಗ್ನಿ ಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಇಂದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬಾವಿಯಲ್ಲಿರುವ ನೀರನ್ನು ಹೊರತೆಗೆದು ಶವವನ್ನು ಮೇಲೆತ್ತಿದ್ದಾರೆ. ಇನ್ನು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಬೆಸ್ಕಾಂ ನೌಕರನ ಸಾವಿಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಈ ಸಂಬಂಧ ಅರಸೀಕೆರೆ ಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.