ಬೆಂಗಳೂರು: ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ(91) ಅವರು ಇಂದು ಮಧ್ಯಾಹ್ನ 1.5ರ ವೇಳೆಯಲ್ಲಿ ಹೃದಯಾಘಾತಕ್ಕೆ ತುತ್ತಾಗಿ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಸ್ವಾಮಿ ಹರ್ಷಾನಂದ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದರು. ರಾಮಕೃಷ್ಣ ಮಠವು ಮೂಲತಃ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿದ್ದು, ಸ್ವಾಮಿ ಹರ್ಷಾನಂದ ಶ್ರೀಗಳು ಬೆಂಗಳೂರು ಶಾಖಾ ಮಠದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
ರಾಮಕೃಷ್ಣ ಪರಮಹಂಸರ ಶಿಷ್ಯರಾದ ಸ್ವಾಮಿ ವಿವೇಕಾನಂದರ ಜನ್ಮದಿನವಾದ ಇಂದೇ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಹರ್ಷಾನಂದ ಶ್ರೀಗಳು ಕೊನೆಯುಸಿರೆಳೆದಿದ್ದಾರೆ. ಹರ್ಷಾನಂದ ಶ್ರೀಗಳ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.