BREAKING : ಕುವೆಂಪು ಕಾದಂಬರಿಯನ್ನು ಇಂಗ್ಲಿಷ್ ಗೆ ಅನುವಾದಿಸಿದ್ದ ಶ್ರೀನಿವಾಸಗೌಡ ವಿಧಿವಶ; ಸಂತಾಪ ಸೂಚಿಸಿದ ಸುಧಾಕರ್

ಬೆಂಗಳೂರು: ಲೇಖಕ, ರಂಗಕರ್ಮಿ, ಕುವೆಂಪು ಕಾದಂಬರಿಯನ್ನು ಇಂಗ್ಲಿಷ್ ಗೆ ಅನುವಾದಿಸಿದ್ದ ಡಾ.ಎಂ.ಕೆ.ಶ್ರೀನಿವಾಸಗೌಡ ಅವರು ವಿಧಿವಶರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ‘ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಮಾಜಿ…

ಬೆಂಗಳೂರು: ಲೇಖಕ, ರಂಗಕರ್ಮಿ, ಕುವೆಂಪು ಕಾದಂಬರಿಯನ್ನು ಇಂಗ್ಲಿಷ್ ಗೆ ಅನುವಾದಿಸಿದ್ದ ಡಾ.ಎಂ.ಕೆ.ಶ್ರೀನಿವಾಸಗೌಡ ಅವರು ವಿಧಿವಶರಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ‘ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಮಾಜಿ ಕುಲಸಚಿವರು, ಲೇಖಕರು, ರಂಗಕರ್ಮಿಗಳಾದ ಡಾ.ಎಂ.ಕೆ.ಶ್ರೀನಿವಾಸಗೌಡರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ’ ಎಂದು ಹೇಳಿದ್ದಾರೆ.

ಇನ್ನು, ಅಂಕಣಕಾರ, ರಂಗಕರ್ಮಿಯಾಗಿ ಬಹುಮುಖ ವ್ಯಕ್ತಿತ್ವ ಹೊಂದಿದ್ದ ಶ್ರೀನಿವಾಸ್ ಗೌಡ ಅವರು ನಾಡ ಕವಿ ಕುವೆಂಪು ಅವರ ಮಲೆಗಳಲ್ಲಿ ಮದುಮಗಳು ಕಾದಂಬರಿಯನ್ನು ಇಂಗ್ಲಿಷ್ ಗೆ ಅನುವಾದಿಸಿ ಖ್ಯಾತಿ ಗಳಿಸಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.